ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು | ಕಮರಿಗೆ ಉರುಳಿದ ಮಿನಿ ಬಸ್‌: ಓರ್ವ ವ್ಯಕ್ತಿ ಸಾವು, 17 ಮಂದಿಗೆ ಗಾಯ

Published 21 ಜನವರಿ 2024, 11:33 IST
Last Updated 21 ಜನವರಿ 2024, 11:33 IST
ಅಕ್ಷರ ಗಾತ್ರ

ಶ್ರೀನಗರ: ಮಿನಿ ಬಸ್‌ ಕಮರಿಗೆ ಉರುಳಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹದಿನೇಳು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದಿದೆ.

ರಜೌರಿ ಜಿಲ್ಲೆಯ ಸರ್ಯೋ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಿನಿ ಬಸ್‌ ತೆರ್ಯಾತ್‌ನಿಂದ ಪೌನಿ ಕಡೆಗೆ ಹೋಗುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT