ಲಖನೌ: ಮದುವೆಯಾದ ಕೆಲವೇ ದಿನಗಳಲ್ಲಿ ತನ್ನ ಪತಿಯನ್ನು ಕೊಲೆ ಮಾಡಿಸಲು ಸುಪಾರಿ ಕೊಟ್ಟ ಆರೋಪದಡಿ ಪತ್ನಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ದಿಲೀಪ್ ಯಾದವ್ (25) ಎಂದು ಗುರುತಿಸಲಾಗಿದೆ.
.ವಿದೇಶಿ ನಿಧಿಯ ಒಳಹರಿವು: ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್, ನಿಫ್ಟಿ ಏರಿಕೆ .ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ: ಬಿಆರ್ಎಸ್ ನಾಯಕಿ.
ಯಾದವ್ ಅವರನ್ನು ಕೊಲೆ ಮಾಡಿಸಲು ಪತ್ನಿ ಮತ್ತು ಆಕೆಯ ಪ್ರಿಯಕರ ಸಂಚು ರೂಪಿಸಿದ್ದರು. ಅದಕ್ಕಾಗಿ ಸುಪಾರಿ ಕಿಲ್ಲರ್ ಅವರನ್ನು ನೇಮಿಸಿಕೊಂಡಿದ್ದರು. ಯಾದವ್ ಹೊಲವೊಂದರಲ್ಲಿ ಗಾಯಗೊಂಡು ಬಿದ್ದಿದ್ದರ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿತ್ತು. ಯಾದವ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ಔರೈಯಾ ಪೊಲೀಸ್ ವರಿಷ್ಠಾಧಿಕಾರಿ ಅಭಿಜಿತ್ ಆರ್.ಶಂಕರ್ ಹೇಳಿದ್ದಾರೆ ಹೇಳಿದ್ದಾರೆ.

ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಪರಿಶೀಲಿಸಿದ ಬಳಿಕ ಪತ್ನಿ ಪ್ರಗತಿ ಯಾದವ್ (22), ಆಕೆಯ ಪ್ರಿಯಕರ ಅನುರಾಗ್ ಅಲಿಯಾಸ್ ಮನೋಜ್ ಮತ್ತು ಸುಪಾರಿ ಕಿಲ್ಲರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
.5ನೇ ತರಗತಿ ವಿದ್ಯಾರ್ಥಿನಿಯನ್ನು ಥಳಿಸಿದ ಶಿಕ್ಷಕಿಯ ವಿರುದ್ಧ ಎಫ್ಐಆರ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.