ಅಲಿಗಢ : ಬೀದಿನಾಯಿಗಳ ಗುಂಪು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ(ಎಂಎಯು) ಆವರಣದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಬಳಿಯ ಜನವಸತಿ ಪ್ರದೇಶವೊಂದರ ನಿವಾಸಿ ಸಫ್ದಾರ್ ಅಲಿ ಎಂಬುವವರು ಸರ್ ಸೈಯದ್ ವಸ್ತು ಸಂಗ್ರಹಾಲಯದ ಬಳಿ ವಾಯುವಿಹಾರಕ್ಕಾಗಿ ಬಂದಿದ್ದ ವೇಳೆ ನಾಯಿಗಳು ಅವರ ಮೇಲೆ ದಾಳಿ ನಡೆಸಿದವು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಅಷ್ಟರಲ್ಲಿ ಸಫ್ದಾರ್ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ದೃಶ್ಯಾವಳಿಗಳು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಘಟನೆ ಕುರಿತು ವಿ.ವಿ ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.