ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಧ್ಯ ಪ್ರದೇಶ: ಹುಲಿ ದಾಳಿಗೆ ವ್ಯಕ್ತಿ ಬಲಿ

Published 16 ಮೇ 2024, 14:39 IST
Last Updated 16 ಮೇ 2024, 14:39 IST
ಅಕ್ಷರ ಗಾತ್ರ

ಭೋಪಾಲ್‌: ಹುಲಿಯು ವ್ಯಕ್ತಿಯೊಬ್ಬರನ್ನು ಕೊಂದು, ದೇಹದ ಭಾಗಗಳನ್ನು ತಿಂದು ಹಾಕಿರುವ ಘಟನೆ ಮಧ್ಯ ಪ್ರದೇಶದ ರಾಯ್‌ಸೇನ್‌ ಜಿಲ್ಲೆಯ ಅರಣ್ಯದಲ್ಲಿ ನಡೆದಿದೆ. 

ಭೋಪಾಲ್‌ ನಗರದಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ನೀಮ್‌ಖೇಡ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ವಿಜಯ್‌ ಕುಮಾರ್‌ ತಿಳಿಸಿದ್ದಾರೆ. 

ಬುಧವಾರ ಮಣಿರಾಮ್‌ ಜಾತವ್‌ (62) ಎಂಬುವವರು ಟೆಂಡು ಎಲೆಗಳನ್ನು ಸಂಗ್ರಹಿಸಲು ಕಾಡಿಗೆ ಹೋದ ವೇಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಮಣಿರಾಮ್ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ. ಕೊರಳಿನಲ್ಲಿರುವ ಕೋರೆಹಲ್ಲುಗಳ ಗುರುತಿನಿಂದ ಮಣಿರಾಮ್‌ ಅವರನ್ನು ಹುಲಿ ಕೊಂದಿರುವುದು ತಿಳಿದುಬಂದಿದೆ. 

60ಕ್ಕೂ ಹೆಚ್ಚು ಹುಲಿಗಳಿರುವ ರಾತಪಾನಿ ವನ್ಯಜೀವಿ ಧಾಮದಿಂದ ಹುಲಿ ಹೊರಗೆ ಬಂದಿರಬೇಕು. ಮೃತ ವ್ಯಕ್ತಿಯ ಕುಟುಂಬಕ್ಕೆ ₹8 ಲಕ್ಷ ಪರಿಹಾರ ನೀಡಲಾಗಿದೆ. ಗ್ರಾಮಸ್ಥರಿಗೆ ಅರಣ್ಯಕ್ಕೆ ತೆರಳದಂತೆ ಮನವಿ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT