ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಲಪ್ಪುರಂ: ಬಾವಿ ಆಳ ಹೆಚ್ಚಿಸಲು ಇಟ್ಟಿದ್ದ ಸ್ಫೋಟಕ ಸಿಡಿದು ವ್ಯಕ್ತಿ ಸಾವು

Published 12 ಮೇ 2024, 2:55 IST
Last Updated 12 ಮೇ 2024, 2:55 IST
ಅಕ್ಷರ ಗಾತ್ರ

ಮಲಪ್ಪುರಂ (ಕೇರಳ): ಬಾವಿಯ ಆಳ ಹೆಚ್ಚಿಸಲು ಇಟ್ಟಿದ್ದ ಸ್ಫೋಟಕ ಸಿಡಿದು ವ್ಯಕ್ತಿಯೊಬ್ಬ ದುರಂತ ಸಾವಿಗೀಡಾದ ಘಟನೆ ಇಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟಕ ಬಾವಿಯಿಂದ ಹೊರಬರುವ ಮುಂಚೆಯೇ ಅದು ಸಿಡಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಮಿಳುನಾಡು ಮೂಲದ ರಾಜೇಂದ್ರನ್‌ ಎಂಬುವವರೇ ಮೃತ ದುರ್ದೈವಿ . ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

ದೇಹದ ಪೂರ್ತಿ ಗಾಯಗಳಾಗಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT