ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉ.ಪ್ರ: ಪತ್ನಿಯೊಂದಿಗೆ ಜಗಳವಾಡಿ ಮೂರು ವರ್ಷದ ಮಗನನ್ನು ಕೊಂದ ವ್ಯಕ್ತಿ!

Published : 3 ಆಗಸ್ಟ್ 2024, 16:05 IST
Last Updated : 3 ಆಗಸ್ಟ್ 2024, 16:05 IST
ಫಾಲೋ ಮಾಡಿ
Comments

ಸೀತಾಪುರ: ಪತ್ನಿಯೊಂದಿಗೆ ಜಗಳವಾಡಿ ವ್ಯಕ್ತಿಯೊಬ್ಬ ಮೂರು ವರ್ಷ ಮಗುವನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಸರ್ದಾಪುರದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋ‍ಪಿ ಬಾಲು ತನ್ನ ಮಗನನ್ನು ಪಕ್ಕ ಗದ್ದೆಗೆ ಕರೆದುಕೊಂಡು ಹೋಗಿ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ ಎಂದು ಮಹಮೂದಾಬಾದ್‌ನ ವೃತ್ತ ಅಧಿಕಾರಿ ದಿನೇಶ್ ಶುಕ್ಲಾ ಹೇಳಿದ್ದಾರೆ.

ಪತ್ನಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಶುಕ್ಲಾ ತಿಳಿಸಿದ್ದಾರೆ.

ಮೂರು ವರ್ಷದ ಮಗು ನಿಖಿಲ್‌ನ ಮೃತದೇಹ ಗದ್ದೆಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಶುಕ್ಲಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT