ಮುಂಬೈ: ಸಾರ್ವಜನಿಕ ಶೌಚಾಲಯ ಬಳಕೆ ಮಾಡಿ, ಹಣ ಪಾವತಿ ಮಾಡು ಎಂದಿದ್ದಕ್ಕೆ ವ್ಯಕ್ತಿಯೊಬ್ಬ, ಶೌಚಾಲಯ ನೋಡಿಕೊಳ್ಳುವ ಸಿಬ್ಬಂದಿಯನ್ನೇ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.

ಕೇಂದ್ರ ಮುಂಬೈ ದಾದರ್‌ನ ಬಸ್ ನಿಲ್ದಾಣದ ಮುಂಭಾಗದಲ್ಲಿ ಇರುವ ಸಾರ್ವಜನಿಕ ಶೌಚಾಲಯದ ಆವರಣದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಆರೋಪಿ ರಾಹುಲ್ ಪವಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಶೌಚಾಲಯ ಬಳಕೆ ಮಾಡಿದ ಬಳಿಕ ಆರೋಪಿಯು, ಹಣ ಪಾವತಿ ಮಾಡದೆ ತೆರಳಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಶೌಚಾಲಯ ಸಿಬ್ಬಂದಿ ವಿಶ್ವಜೀತ್, ರಾಹುಲ್‌ನನ್ನು ತಡೆದಿದ್ದಾರೆ.

ಹಣ ಪಾವತಿ ಸಂಬಂಧ, ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಆರೋಪಿ ರಾಹುಲ್ ಚಾಕು ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ವಿಶ್ವಜೀತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಾತುಂಗಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.