ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಇಂಡಿಗೊ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ ಬಂಧನ

Published 5 ಮಾರ್ಚ್ 2024, 13:01 IST
Last Updated 5 ಮಾರ್ಚ್ 2024, 13:01 IST
ಅಕ್ಷರ ಗಾತ್ರ

ಮುಂಬೈ: ವಿಮಾನ ಪ್ರಯಾಣದ ವೇಳೆ ಬೀಡಿ ಸೇದಿದ ವ್ಯಕ್ತಿಯನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು 42 ವರ್ಷದ ಮೊಹಮ್ಮದ್ ಫಕ್ರುದ್ದೀನ್ ಎಂದು ಗುರುತಿಸಲಾಗಿದೆ. ಈತ ಇಂಡಿಗೊ ವಿಮಾನದಲ್ಲಿ ದೆಹಲಿಯಿಂದ ಮುಂಬೈಗೆ ಪ್ರಯಾಣ ಮಾಡಿದ್ದು, ಪ್ರಯಾಣದ ವೇಳೆ ಶೌಚಾಲಯಕ್ಕೆ ತೆರಳಿ ಬೀಡಿ ಸೇದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೂಡಲೇ ವಿಮಾನ ಸಿಬ್ಬಂದಿ ಕ್ರಮ ತೆಗೆದುಕೊಂಡಿದ್ದು, ಲ್ಯಾಂಡ್ ಆದ ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು ಏರ್‌ಕ್ರಾಫ್ಟ್ ಆಕ್ಟ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದೇ ರೀತಿಯ ಘಟನೆಯಲ್ಲಿ 2023ರ ಮೇ ತಿಂಗಳಲ್ಲಿ ವಿಮಾನದಲ್ಲಿ ಬೀಡಿ ಸೇದುತ್ತಿದ್ದ 56 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT