ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳ ಮಾಡಿ ತಂದೆ, ತಾಯಿ, ಅಜ್ಜಿ, ಸಹೋದರಿಯನ್ನು ಕೊಂದ ವ್ಯಕ್ತಿ ಬಂಧನ

Last Updated 23 ನವೆಂಬರ್ 2022, 7:25 IST
ಅಕ್ಷರ ಗಾತ್ರ

ನವದೆಹಲಿ: ಜಗಳದ ನಂತರ ವ್ಯಕ್ತಿಯೊಬ್ಬ ತನ್ನ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿದ ಘಟನೆ ದೆಹಲಿಯ ಪಾಲಂನಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷದ ಆರೋಪಿ ಕೇಶವ್‌ ಎಂಬಾತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:

ಮೃತರನ್ನು ಆರೋಪಿಯ ತಂದೆ ದಿನೇಶ್, ತಾಯಿ ದರ್ಶನಾ, ಸಹೋದರಿ ಊರ್ವಷಿ ಮತ್ತು ಅಜ್ಜಿ ದೀವಾನಾ ದೇವಿ ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಆತನ ಸಂಬಂಧಿಕರು ಹಿಡಿದಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT