ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂದಿ ಸೆರೆಗೆ ಅಳವಡಿಸಲಾಗಿದ್ದ ವಿದ್ಯುತ್‌ ತಂತಿ ತಗುಲಿ ಇಬ್ಬರು ಸಾವು

Published 5 ಅಕ್ಟೋಬರ್ 2023, 11:24 IST
Last Updated 5 ಅಕ್ಟೋಬರ್ 2023, 11:24 IST
ಅಕ್ಷರ ಗಾತ್ರ

ಪಾಲ್ಗರ್‌: ಮಹಾರಾಷ್ಟ್ರದ ಪಾಲ್ಗರ್‌ನಲ್ಲಿ ಹಂದಿಗಳನ್ನು ಹಿಡಿಯಲು ಅಳವಡಿಸಲಾಗಿದ್ದ ವಿದ್ಯುತ್‌ ತಂತಿ ತಗುಲಿ ಗುರುವಾರ ಬೆಳಿಗ್ಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ದಿನೇಶ್ ಬೋಸ್‌ (22) ಹಾಗೂ ಸುಜಿತ್‌ ಮಸ್ಕರ್‌ (16) ಮೃತಪಟ್ಟವರು.

ಏಡಿ ಹಿಡಿಯುವ ವೇಳೆ ವಿದ್ಯುತ್‌ ತಂತಿ ತಗುಲಿ ಈ ದುರಂತ ಸಂಭವಿಸಿದೆ.

‍‘ಹಂದಿಗಳ ಸೆರೆಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥ ವಿವೇಕಾನಂದ ಕದಂ ಹೇಳಿದ್ದಾರೆ.

‘ಗುರುವಾರ ಬೆಳಿಗ್ಗೆ ಸುಮಾರು 9.30ರ ವೇಳಗೆ ನಂದೋರ್ ಬಸವತ್‌ಪಾಡ ಗ್ರಾಮದಲ್ಲಿ ನಡೆದಿದೆ. ಮೃತರಿಬ್ಬರು ಏಡಿ ಹಿಡಿಯಲು ಹೋಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT