ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯೊಂದಿಗೆ ಓಡಿ ಹೋಗಿದ್ದ ವ್ಯಕ್ತಿಯನ್ನು ಥಳಿಸಿ, ಮೂತ್ರ ಕುಡಿಸಿದ ಕಿಡಿಗೇಡಿಗಳು

Published 20 ಮಾರ್ಚ್ 2024, 9:35 IST
Last Updated 20 ಮಾರ್ಚ್ 2024, 9:35 IST
ಅಕ್ಷರ ಗಾತ್ರ

ಉಜ್ಜಯಿನಿ (ಮಧ್ಯಪ್ರದೇಶ): ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿದ್ದ ಎಂದು ಆರೋಪಿಸಿದ ಗುಂಪೊಂದು, ವ್ಯಕ್ತಿಗೆ ಮೂತ್ರ ಕುಡಿಸಿ ಹಾಗೂ ಶೂಗಳ ಹಾರ ಹಾಕಿ ಮನಸೋಇಚ್ಛೆ ಥಳಿಸಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಆದರೆ, ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೊವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಶೂಗಳ ಹಾರವನ್ನು ಹಾಕಿ ಮೆರವಣಿಗೆ ಮಾಡಲಾಗಿದ್ದು, ಸ್ಥಳೀಯರು ಆತನಿಗೆ ಬಲವಂತದಿಂದ ಮೂತ್ರವನ್ನು ಕುಡಿಯುವಂತೆ ಒತ್ತಾಯಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಮತ್ತೊಂದು ವಿಡಿಯೊದಲ್ಲಿ ಸಂತ್ರಸ್ತ ವ್ಯಕ್ತಿಗೆ ಅರ್ಧ ಮೀಸೆ ಮತ್ತು ತಲೆಯನ್ನು ಬೋಳಿಸಲಾಗಿದ್ದು, ತನ್ನ ಕೈಯಲ್ಲಿ ಹಿಡಿದಿದ್ದ ಶೂ ಅನ್ನು ನೆಕ್ಕುವಂತೆ ಹಾಗೂ ಮತ್ತೊಂದು ಶೂ ಅನ್ನು ತಲೆಯ ಮೇಲೆ ಇಟ್ಟುಕೊಳ್ಳುವಂತೆ ಬಲವಂತ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.‌

ಭಾಟ್‌ಪಚ್ಲಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಭಿಲ್ಖೇಡಿ ಗ್ರಾಮದ ಬಂಜಾರ ಸಮುದಾಯದ ವಿವಾಹಿತ ಮಹಿಳೆಯೊಂದಿಗೆ ಸಂತ್ರಸ್ತ ವ್ಯಕ್ತಿ ಓಡಿಹೋಗಿದ್ದ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಭಾರ್ಗವ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT