ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವಂತ ನವಿಲಿನ ಗರಿ ಕಿತ್ತು ಚಿತ್ರಹಿಂಸೆ; ದುಷ್ಕರ್ಮಿಗಾಗಿ ಪೊಲೀಸರ ಹುಡುಕಾಟ

Published 21 ಮೇ 2023, 7:58 IST
Last Updated 21 ಮೇ 2023, 7:58 IST
ಅಕ್ಷರ ಗಾತ್ರ

ಮಧ್ಯಪ್ರದೇಶ: ಜೀವಂತ ನವಿಲಿನ ಗರಿಗಳನ್ನು ಕಿತ್ತು ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶದ ಪೊಲೀಸರು ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದ ಕಟ್ನಿ ಗ್ರಾಮದ ಅತುಲ್‌ ಎಂಬಾತ ಜೀವಂತ ನವಿಲಿನ ಗರಿಗಳನ್ನು ಕಿತ್ತು ಚಿತ್ರಹಿಂಸೆ ನೀಡಿದ್ದಾನೆ. ಈ ವೇಳೆ ಆತನ ಸ್ನೇಹಿತೆ ಪಕ್ಕದಲ್ಲಿ ಕುಳಿತಿದ್ದಾಳೆ. ನವಿಲಿಗೆ ಚಿತ್ರಹಿಂಸೆ ನೀಡುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ವಿಡಿಯೊ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಅತುಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

'ವಿಡಿಯೊದಲ್ಲಿ ಕಂಡುಬರುವ ಬೈಕ್ ಸಂಖ್ಯೆ ಆಧರಿಸಿ ಯುವಕನನ್ನು ಗುರುತಿಸಲಾಗಿದೆ. ರೀತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಪ್ರದೇಶದಲ್ಲಿ ಅತುಲ್‌ ವಾಸಿಸುತ್ತಿರುವುದು ತಿಳಿದುಬಂದಿದೆ' ಎಂದು ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಗೌರವ್ ಶರ್ಮಾ ಹೇಳಿದ್ದಾರೆ.

'ಅತುಲ್‌ನನ್ನು ಬಂಧಿಸಲು ಪೊಲೀಸರು ಆತನ ಮನೆಗೆ ಹೋಗಿದ್ದು, ಅತುಲ್‌ ತಲೆಮರೆಸಿಕೊಂಡಿದ್ದಾನೆ. ಆರೋಪಿಯನ್ನು ಕಂಡರೆ ಮಾಹಿತಿ ನೀಡುವಂತೆ ಸ್ಥಳೀಯರು ಮತ್ತು ಮಾಧ್ಯಮವರಿಗೆ ಪೊಲೀಸರು ಸೂಚಿಸಿದ್ದಾರೆ ’ ಎಂದು ಶರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT