ಕೌಶಾಂಬಿ/ ಲಖನೌ: ಉತ್ತರ ಪ್ರದೇಶದ ಪೊಲೀಸರು ಮಂಗಳವಾರ ಬೆಳಿಗ್ಗೆ ಇಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಪಾತಕಿ ಗುಫ್ರಾನ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆಯು ಜಿಲ್ಲೆಯ ಸಮದಾ ಗ್ರಾಮದ ಸಮೀಪ ನಡೆಸಿದ ಗುಂಡಿನ ಕಾಳಗದಲ್ಲಿ ಪಾತಕಿ ಗುಫ್ರಾನ್ ತೀವ್ರ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.
‘ಗುಫ್ರಾನ್ ವಿರುದ್ಧ 13 ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದವು. ಈತನ ಸುಳಿವು ನೀಡಿದವರಿಗೆ ₹1.25ಲಕ್ಷ ಬಹುಮಾನ ಘೋಷಿಸಲಾಗಿತ್ತು. ಈತನ ಬಳಿ ಇದ್ದ ಒಂದು ಬಂದೂಕು, ಒಂದು ಪಿಸ್ತೂಲ್ ಮತ್ತು ಮೋಟಾರ್ ಬೈಕನ್ನು ವಶಕ್ಕೆ ಪಡೆಯಲಾಗಿದೆ’ ಎಂದೂ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.