ಅಮೃತಸರ: ಇಲ್ಲಿಯ ಸ್ವರ್ಣ ಮಂದಿರದ ಆವರಣದಲ್ಲಿ ವ್ಯಕ್ತಿಯೊಬ್ಬ ನೆರೆದಿದ್ದ ಭಕ್ತರ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಿದ್ದು, ಐವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಆರೋಪಿಯನ್ನು ಜುಲ್ಪಿನ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಅಪರಿಚಿತ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ನಿಂದ ದಾಳಿ ನಡೆಸಿದ್ದಾನೆ ಎಂದು ಗಾಯಾಳುಗಳು ನೀಡಿದ ಹೇಳಿದ್ದಾರೆ. ಐವರು ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಉಳಿದ ನಾಲ್ವರ ಆರೋಗ್ಯ ಸ್ಥಿರವಾಗಿದೆ’ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಎಎನ್ಐಗೆ ತಿಳಿಸಿದ್ದಾರೆ.

ಮಂದಿರದ ಒಳಗೆ ಸಮುದಾಯದ ಅಡುಗೆ ಕೋಣೆ ಬಳಿ ಘಟನೆ ನಡೆದಿದೆ.

ಮಂದಿರದ ಒಳಗೇ ದಾಳಿ ನಡೆದಿರುವುದು ಸಿಖ್ ಸಮುದಾಯದವರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

‘ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿ ನಡೆಸಲು ಕಾರಣವೇನು ಎನ್ನುವುದನ್ನು ತನಿಖೆ ಮಾಡುತ್ತೇವೆ, ಜನರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.