ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥಾಣೆ | ನವರಾತ್ರಿ ಮೆರವಣಿಗೆ; ಪಟಾಕಿ ಸಿಡಿದು 4 ಮಂದಿಗೆ ಗಾಯ, ಒಬ್ಬನಿಗೆ ಕಲ್ಲೇಟು

Published 16 ಅಕ್ಟೋಬರ್ 2023, 6:41 IST
Last Updated 16 ಅಕ್ಟೋಬರ್ 2023, 6:41 IST
ಅಕ್ಷರ ಗಾತ್ರ

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನವರಾತ್ರಿ ಆಚರಣೆ ಪ್ರಯುಕ್ತ ದುರ್ಗಾ ಮಾತೆ ಮೂರ್ತಿ ಮೆರವಣಿಗೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ಎರಡು ಗುಂಪಿನ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ ಪಟಾಕಿ ಕಿಡಿ ತಗುಲಿ ನಾಲ್ಕು ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಗಾಯಾಳುಗಳು ಶ್ರೀನಗರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

9 ದಿನಗಳ ನವರಾತ್ರಿ ಉತ್ಸವ ಭಾನುವಾರ ಆರಂಭವಾಗಿದೆ. ರಾತ್ರಿ 9ರ ಸುಮಾರಿಗೆ ಹನುಮಾನ್‌ ನಗರ ಪ್ರದೇಶದಲ್ಲಿ ದೇವಿ ಮೂರ್ತಿ ಮೆರವಣಿಗೆ ಸಾಗಿತ್ತು. ಈ ವೇಳೆ ಪಟಾಕಿ ಸಿಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಗಲಾಟೆ ವೇಳೆ ಕೆಲವರು ಅಜಾಗರೂಕವಾಗಿ ಪಟಾಕಿ ಸಿಡಿಸಿದ್ದು, ಸ್ಥಳದಲ್ಲಿದ್ದ ನಾಲ್ಕು ಮಂದಿಗೆ ಗಾಯಗಳಾಗಿವೆ. ಕಲ್ಲು ತೂರಾಟವೂ ನಡೆದಿದೆ. ಇದರಿಂದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT