ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ: ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ ಯೋಧ ಆತ್ಮಹತ್ಯೆ

Published 24 ಜನವರಿ 2024, 14:03 IST
Last Updated 24 ಜನವರಿ 2024, 14:03 IST
ಅಕ್ಷರ ಗಾತ್ರ

ಪಿಟಿಐ

ಇಂಫಾಲ: ಮಣಿಪುರದ ಚಂದೇಲ್‌ ಜಿಲ್ಲೆಯ ಸಾಜಿಕ್‌ ತಂಪಕ್‌ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್‌ನ ಯೋಧರೊಬ್ಬರು ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳವಾರ ರಾತ್ರಿ ಈ ಪ್ರಕರಣ ನಡೆದಿದ್ದು, ಅಸ್ಸಾಂ ರೈಫಲ್ಸ್‌ನ ಆರು ಮಂದಿ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ಈ ಪ್ರಕರಣಕ್ಕೂ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಗಲಭೆಗೂ ಯಾವುದೇ ನಂಟಿಲ್ಲ. ಗಾಯಗೊಂಡಿರುವ ಯೋಧರು ಮಣಿಪುರದವರಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ’ ಎಂದು ಮಣಿಪುರ ಪೊಲೀಸರು ಎಕ್ಸ್‌ ವೇದಿಕೆಯಲ್ಲಿ ಹೇಳಿದ್ದಾರೆ.

ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT