ಇಂಫಾಲ್: ಬಿಷ್ಣುಪುರ ಜಿಲ್ಲೆಯ ಫುಬಲಾ ಗ್ರಾಮದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಗುಂಪಿನ ಮೇಲೆ ಹತ್ತಿರದ ಗುಡ್ಡಗಾಡು ಪ್ರದೇಶಗಳಿಂದ ಗುಂಡಿನ ದಾಳಿ ನಡೆಸಿದ್ದರಿಂದ ರೈತರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ನಿಂಗ್ತೌಜಮ್ ಬಿರೇನ್ ಅವರು ಗುಂಡಿನ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ನಾನು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಐದು ಸುತ್ತು ಗುಂಡಿನ ದಾಳಿ ನಡೆಸಿದರು. ಸುತ್ತಲಿನ ಗುಡ್ಡಗಾಡು ಪ್ರದೇಶದಿಂದಲೇ ಈ ದಾಳಿ ನಡೆದಿದೆ’ ಎಂದು ಅವರು ತಿಳಿಸಿದರು.

ಇಂಫಾಲ್ ಕಣಿವೆಯ ಹೊರವಲಯದಲ್ಲಿರುವ ಫುಬಲಾ ವಿಸ್ತಾರವಾದ ಕೃಷಿ ಭೂಮಿಯನ್ನು ಹೊಂದಿದ್ದು, ಒಂದು ಭಾಗದಲ್ಲಿ ಚುರಾಚಾಂದ್ಪುರದ ಬೆಟ್ಟ ಗುಡ್ಡಗಳನ್ನು ಒಳಗೊಂಡಿದೆ. ಘಟನೆ ನಡೆದ ಬಳಿಕ ಭದ್ರತಾ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

‘ಸ್ಥಳೀಯರು ಫುಬಲಾವನ್ನು ಸಂಪೂರ್ಣ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸಂಚಾರ ಮಾಡುವುದನ್ನು ನಿರ್ಬಂಧಿಸಿ, ಭದ್ರತಾ ಪಡೆಗಳು ಕ್ರಮ ಕೈಗೊಂಡಿವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.