ಇಂಫಾಲ್ (ಪಿಟಿಐ): ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಿಷೇಧಿತ ಯುಎನ್ಎಲ್ಎಫ್(ಪಾಂಬೈ) ಸಂಘಟನೆಯ ನಾಲ್ವರನ್ನು ಬಂಧಿಸಿರುವ ಪೊಲೀಸರು 60ಕ್ಕೂ ಅಧಿಕ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ.

‘ಭದ್ರತಾ ಪಡೆಗಳಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಮಾರಾಟಕ್ಕಾಗಿ ಲಾಮ್ಡೆಂಗ್ಗೆ ತರಲಾಗುತ್ತಿದೆ ಎಂಬ ಗುಪ್ತಚರ ಮಾಹಿತಿಯ ಆಧಾರದಲ್ಲಿ ಯುಎನ್ಎಲ್ಎಫ್ ಶಿಬಿರದಲ್ಲಿ ಶೋಧ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಬಂಧಿತರ ಸಹಚರರಿಬ್ಬರು ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಅವರನ್ನು ಬಂಧಿಸಲಾಗಿದೆ.

‘ಎಕೆ ಸರಣಿಯ ರೈಫಲ್ಗಳು, ಎಂ ಸರಣಿಯ ರೈಫಲ್ಗಳು, ಪಿಸ್ತೂಲ್ ಮತ್ತು ಸ್ಫೋಟಕಗಳು, ಆರ್ಪಿಜಿ ಉಡಾವಣಾ ವಾಹಕ ಸೇರಿದಂತೆ 38 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-724428992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.