ಇಂಫಾಲ್/ ಚುರಾಚಾಂದಪುರ: ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷಕ್ಕೆ ಭಾನುವಾರ ಮೂರು ವರ್ಷವಾಗಿದೆ. ಇದರ ಅಂಗವಾಗಿ ಕುಕಿ ಮತ್ತು ಮೈತೇಯಿ ಸಮುದಾಯಗಳು ರ್ಯಾಲಿ, ಸಭೆ ಮತ್ತು ಬಂದ್ ಆಚರಿಸಿದವು.

ಜನಗಣತಿಗೆ ಮುನ್ನ ಎನ್ಆರ್ಸಿ ಅನುಷ್ಠಾನ ಮತ್ತು ಮಣಿಪುರದ ಆಡಳಿತ ಮತ್ತು ಪ್ರಾದೇಶಿಕ ಸಮಗ್ರತೆ ಯನ್ನು ರಕ್ಷಿಸುವಂತೆ ಒತ್ತಾಯಿಸಿ ಮೈತೇಯಿ ಸಮುದಾಯ ಇಂಫಾಲ್ನ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಮೆರವಣಿಗೆ ಆಯೋಜಿಸಿತ್ತು. ಕುಕಿ ಝೋ ಸಂಘಟನೆಗಳು ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಬಂದ್ ಮತ್ತು ಚುರಾ ಚಾಂದಪುರ ಜಿಲ್ಲೆಯಲ್ಲಿ ಸಭೆಗಳನ್ನು ನಡೆಸಿದವು. 2023ರ ಮೇ 3ರಂದು ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಸಂಘರ್ಷ ಆರಂಭವಾಯಿತು. ಇದರಲ್ಲಿ 260 ಮಂದಿ ಮೃತಪಟ್ಟಿದ್ದು, ಸಾವಿರಾರು ನಿವಾಸಿಗಳು ಸ್ಥಳಾಂತರಗೊಂಡಿದ್ದಾರೆ. ಮಣಿಪುರದಲ್ಲಿ ಒಂದು ವರ್ಷ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-1263547124

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.