ದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮಣಿಪುರ ಮೂಲದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.

‘ಸೌದಿ ಅರೇಬಿಯಾದ ಜೆದ್ದಾ ನಗರದಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬಂದಿಳಿದ 24 ವರ್ಷದ ವ್ಯಕ್ತಿಯನ್ನು ತಪಾಸಣೆ ನಡೆಸಲಾಯಿತು. ಈ ವೇಳೆ ಚಿನ್ನ ಎಂದು ಶಂಕಿಸಲಾದ ಹಳದಿ ರಾಸಾಯನಿಕ ಪೇಸ್ಟ್ ಒಳಗೊಂಡಿದ್ದ ಅಂಡಾಕಾರಾದ ಮೂರು ಮಾತ್ರೆಗಳು ಪತ್ತೆಯಾಗಿದ್ದು, ₹70 ಲಕ್ಷಕ್ಕೂ ಹೆಚ್ಚಿನ ಮೌಲ್ಯದ 951 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಯಿತು’ ಎಂದು ಕಸ್ಟಮ್ಸ್ ಇಲಾಖೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ಇದರೊಂದಿಗೆ, ₹1.7 ಲಕ್ಷ ಮೌಲ್ಯದ 23 ಗ್ರಾಂ ತೂಕದ ಎರಡು ಚಿನ್ನದ ಬಿಸ್ಕೆಟ್ಗಳನ್ನು ವಶಡಿಸಿಕೊಳ್ಳಲಾಗಿದೆ. ಒಟ್ಟು ₹72.07 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.