ಗುವಾಹಟಿ: ಮಣಿಪುರದಲ್ಲಿ ನಡೆದ ಸಂಘರ್ಷದಿಂದ ಸ್ಥಳಾಂತರಗೊಂಡ ಮೈತೇಯಿ ಸಮುದಾಯದ ಜನರಲ್ಲಿ ಆಕ್ರೋಶ ಹೆಚ್ಚುತ್ತಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಇಂಫಾಲ್ನಲ್ಲಿ ಪ್ರತಿಭಟನೆ ನಡೆಸಿದರು.

ಮೈತೇಯಿ ಸಮುದಾಯವನ್ನು ಪ್ರತಿನಿಧಿಸುವ ಸಂಸ್ಥೆಗಳ ವೇದಿಕೆಯಾದ ‘ಮಣಿಪುರ ಏಕತೆ ಸಮನ್ವಯ ಸಮಿತಿ’ಯು (ಸಿಒಸಿಒಎಂಐ) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡರು. ಸಂಘರ್ಷದ ಸಮಯದಲ್ಲಿ ಕುಕಿ ಪ್ರಾಬಲ್ಯದ ಜಿಲ್ಲೆಗಳಿಂದ ಸ್ಥಳಾಂತರಗೊಂಡ ಮೈತೇಯಿ ಸಮುದಾಯದ ಜನರಿಗೆ ಅವರ ಮನೆಗಳಿಗೆ ತೆರಳಲು ಅನುಕೂಲವಾಗುವಂತಹ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

‘ಸ್ಥಳಾಂತರಗೊಂಡವರ ಪುನರ್ವಸತಿಗೆ ಡಿಸೆಂಬರ್ ಒಳಗಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರ ಈ ಹಿಂದೆ ಭರವಸೆ ನೀಡಿದ್ದರೂ ಅದು ಈಡೇರಿಲ್ಲ. ಜನರು ಪರಿಹಾರ ಶಿಬಿರಗಳಲ್ಲಿ ಸಂಕಷ್ಟದಿಂದ ಬದುಕುತ್ತಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅನೇಕ ಮಂದಿ ಸೂಕ್ತ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಸಾವನ್ನಪ್ಪಿದ್ದಾರೆ’ ಎಂದು ಚುರಾಚಂದ್ಪುರದಿಂದ ಸ್ಥಳಾಂತರಗೊಂಡ ಮೀರಂಬಂ ರತನ್ ಸಿಂಗ್ ಹೇಳಿದರು.

ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದಿದ್ದ ಪುರುಷರು ಮತ್ತು ಮಹಿಳೆಯರು ತಮ್ಮ ಬೇಡಿಕೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಲೋಕ ಭವನದ (ರಾಜ್ ಭವನ) ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ ಪ್ರತಿಭಟನಕಾರರನ್ನು ಭದ್ರತಾ ಪಡೆಗಳು ತಡೆದವು.

ಆ ಬಳಿಕ ಸಿಒಸಿಒಎಂಐ ನಿಯೋಗವು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾಗಿ ಬೇಡಿಕೆಗಳ ಕುರಿತು ಚರ್ಚಿಸಿತು. ನಿರ್ವಸಿತರ ಪುನರ್ವಸತಿಗಾಗಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎಂದು ಭಲ್ಲಾ ಹೇಳಿದರು. ಮಣಿಪುರದಲ್ಲಿ ಕಳೆದ ವರ್ಷದ ಫೆಬ್ರುವರಿಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.