ಇಂಫಾಲ್: ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರನ್ನು ಭದ್ರತಾ ಪಡೆ ಬಂಧಿಸಿದೆ.

ನಿಷೇಧಿತ ಪ್ರಿಪಾಕ್ನ ಮೂವರು ಕಾರ್ಯಕರ್ತರನ್ನು ಕೆಯಿರಾವೋ ಖುನೌ ಪ್ರದೇಶದಲ್ಲಿ ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಕಾನೂನು ಸಂಘರ್ಷ ಎದುರಿಸುತ್ತಿರುವ ಬಾಲಕರಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ನಿಷೇಧಿತ ಕಾಂಗ್ಲೆಯಿಪಾಕ್ ಕಮ್ಯುನಿಸ್ಟ್ ಪಾರ್ಟಿಯ (ಪಿಡಬ್ಲ್ಯೂಜಿ) ಇಬ್ಬರು ಸಕ್ರಿಯ ಕಾರ್ಯಕರ್ತರನ್ನು ಭಾನುವಾರ ಬಂಧಿಸಲಾಗಿದೆ. ಇವರು ಸುಲಿಗೆ ಚಟುವಟಿಕೆಯಲ್ಲಿ ತೊಡಗಿದ್ದರು. ಸುಲಿಗೆಗೆ ಬಂದಾಗ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ಬಿಷ್ಣುಪುರ ಜಿಲ್ಲೆಯಲ್ಲಿ ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಎರಡು ಪಿಸ್ತೂಲ್, ಎರಡು ಖಾಲಿ ಮ್ಯಾಗಝೀನ್ಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.