ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಾಚರಣೆಗೆ ಅಡ್ಡಿ: ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರಿಂದ ಎಫ್‌ಐಆರ್

Published 10 ಆಗಸ್ಟ್ 2023, 9:00 IST
Last Updated 10 ಆಗಸ್ಟ್ 2023, 9:00 IST
ಅಕ್ಷರ ಗಾತ್ರ

ಇಂಫಾಲ್: ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅಸ್ಸಾಂ ರೈಫಲ್ಸ್‌ ವಿರುದ್ಧ ಮಣಿಪುರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಅಸ್ಸಾಂ ರೈಫಲ್ಸ್‌ ಸಿಬ್ಬಂದಿಯು ಬಿಷ್ಣುಪುರ ಜಿಲ್ಲೆಯ ಕ್ವಾಕ್ತಾ ಗೊತೋಲ್‌ ರಸ್ತೆಯಲ್ಲಿ ಸಾಗುತ್ತಿದ್ದ ತಮ್ಮ ವಾಹನಗಳನ್ನು ತಡೆದಿದ್ದಾರೆ ಎಂದು ಆರೋಪಿಸಿ ಮಣಿಪುರ ಪೊಲೀಸರು ಆಗಸ್ಟ್‌ 5ರಂದು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರದಲ್ಲಿ ಪಾಲ್ಗೊಂಡ ಕುಕಿ ಸಮುದಾಯದವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಅದರಂತೆ ಆರೋಪಿಗಳ ಶೋಧ ಕಾರ್ಯಾಚರಣೆ ನಡೆಸಲು ಕ್ವಾಕ್ತಾ ಮೂಲಕ ಸಾಗುತ್ತಿದ್ದಾಗ ಅಸ್ಸಾಂ ರೈಫಲ್ಸ್ ಸಿಬ್ಬಂದಿ ತಡೆದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT