ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಒಬ್ಬನ ಬಂಧನ– ಸಿಎಂ ಬಿರೇನ್ ಸಿಂಗ್

Published 20 ಜುಲೈ 2023, 7:53 IST
Last Updated 20 ಜುಲೈ 2023, 7:53 IST
ಅಕ್ಷರ ಗಾತ್ರ

ಇಂಫಾಲ: ಮಣಿಪುರ ಹಿಂಸಾಚಾರದ ಸಂದರ್ಭ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ತಿಳಿಸಿದ್ದಾರೆ.

‘ಇಬ್ಬರು ಮಹಿಳೆಯರನ್ನು ಅತ್ಯಂತ ಅಗೌರವ ಮತ್ತು ಅಮಾನವೀಯ ನಡೆಸಿಕೊಂಡಿರುವ ಕೃತ್ಯದ ವಿಡಿಯೊ ಕಂಡು ನನ್ನ ಹೃದಯಕ್ಕೆ ತೀವ್ರ ಘಾಸಿಯಾಗಿದೆ. ವಿಡಿಯೊ ಕಾಣಿಸಿಕೊಂಡ ತಕ್ಷಣ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಮಣಿಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಇಂದು ಬೆಳಿಗ್ಗೆ ಮೊದಲ ಬಂಧನ ಮಾಡಿದ್ದಾರೆ’ಎಂದು ಸಿಂಗ್ ಗುರುವಾರ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ, ಪ್ರಕರಣ ಕುರಿತಂತೆ ಸಂಪೂರ್ಣ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ಸಾಧ್ಯತೆಯನ್ನು ಪರಿಗಣಿಸುವುದು ಸೇರಿದಂತೆ ಎಲ್ಲಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸುತ್ತೇವೆ. ನಮ್ಮ ಸಮಾಜದಲ್ಲಿ ಇಂತಹ ಹೇಯ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಮೇ 4ರಂದು ಮಣಿಪುರದ ಹಿಂಸಾಚಾರದ ಸಂದರ್ಭ ದುಷ್ಕರ್ಮಿಗಳು ಕುಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ. 70 ದಿನಗಳ ನಂತರ ಆಘಾತಕಾರಿ ವಿಡಿಯೊ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ಬೆತ್ತಲೆಗೊಳಿಸಿ ಮಹಿಳೆಯರನ್ನು ಮೆರವಣಿಗೆ ಮಾಡುವ ಜೊತೆಗೆ ಕೆಲ ಪುರುಷರು ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ..

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದವರನ್ನು ಸುಮ್ಮನೆ ಬಿಡಲ್ಲ- ಮೌನ ಮುರಿದ ಮೋದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT