ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Manipur Violence ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ; ಸಿಬಿಐ ತನಿಖೆ ಆರಂಭ

Published 29 ಜುಲೈ 2023, 11:21 IST
Last Updated 29 ಜುಲೈ 2023, 11:21 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದಲ್ಲಿ ಮೇ 4ರಂದು ನಡೆದಿದ್ದ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೃತ್ಯದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಈ ಸಂಬಂಧ ವಿಡಿಯೊ ಜುಲೈ 19ರಂದು ಜಾಲತಾಣದಲ್ಲಿ ಸಾಕಷ್ಟು ಹಂಚಿಕೆಯಾಗಿತ್ತು.

ನಿರ್ದಿಷ್ಟ ಸಮುದಾಯದ ಜನರು, ಮತ್ತೊಂದು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದ ಈ ವಿಡಿಯೊ ಬಹಿರಂಗವಾದ ಹಿಂದೆಯೇ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಮಣಿಪುರ ಸರ್ಕಾರದ ಶಿಫಾರಸು ಆಧರಿಸಿ ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ಕೃತ್ಯದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT