ಇಂಫಾಲ್ (ಪಿಟಿಐ): ಮಣಿಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ್ದ ಆರು ಮಂದಿ ಬಂಡುಕೋರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪೀಪಲ್ಸ್ ಲಿಬರೇಷನ್ ಆರ್ಮಿ’ಯ ಮೂವರು ಸೇರಿದಂತೆ ಟೆಂಗ್ನೌಪಾಲ್ ಜಿಲ್ಲೆಯಲ್ಲಿ ನಾಲ್ವರನ್ನು ಬಂಧಿಸಲಾಯಿತು. ‘ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್’ನ ಒಬ್ಬ ಸದಸ್ಯನನ್ನು ಪಶ್ಚಿಮ ಇಂಫಾಲ್ ಹಾಗೂ ಕೆಸಿಪಿಯ ಒಬ್ಬನನ್ನು ಪೂರ್ವ ಇಂಫಾಲ್ನಲ್ಲಿ ಬಂಧಿಸಲಾಗಿದೆ.

ಪೊಲೀಸರು, ಮಾದಕವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಸುಮಾರು 10 ಎಕರೆಯಲ್ಲಿ ಬೆಳೆದಿದ್ದ ಗಸಗಸೆ ಬೆಳೆಯನ್ನು ನಾಶ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.