ಇಂಫಾಲ: ಮಣಿಪುರದ ಹಿಂಸಾಚಾರ ಪೀಡಿತ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ (ಭಾನುವಾರ) ಉದ್ವಿಗ್ನ ವಾತಾವರಣ ಉಂಟಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕಾಂಗ್ಪೋಕ್ಪಿ ಜಿಲ್ಲೆಯ ವಿವಿಧೆಡೆ ಕುಕಿ ಸಮುದಾಯದ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ಪ್ರತಿಭಟನಕಾರ ಮೃತಪಟ್ಟಿದ್ದಾರೆ. ಮಹಿಳೆಯರು ಮತ್ತು ಪೊಲೀಸರು ಸೇರಿದಂತೆ 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿದ್ದ 30 ವರ್ಷ ವಯಸ್ಸಿನ ಲಾಲ್ಗೌಥಾಂಗ್ ಎನ್ನುವವರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು. ಗಾಯಗೊಂಡ 40 ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
.ಕುಲಭೂಷಣ್ ಜಾಧವ್ ಬಂಧನಕ್ಕೆ ಸಹಕರಿಸಿದ್ದ ಪಾಕಿಸ್ತಾನದ ವಿದ್ವಾಂಸನ ಹತ್ಯೆ.Champions Trophy Final | ಭಾರತ ಗೆಲುವಿಗಾಗಿ ಅಭಿಮಾನಿಗಳಿಂದ ಪೂಜೆ, ಪ್ರಾರ್ಥನೆ.
ಜಿಲ್ಲೆಯಲ್ಲಿ ಉದ್ದಕ್ಕೂ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದಾಗಿ ಗಸ್ತು ನಡೆಸಲಾಗುತ್ತಿದೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಜನರ ಸಂಚಾರಕ್ಕೆ ನಿರ್ಬಂಧಗಳು ಇರಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಸೂಚನೆಯನ್ನು ಕುಕಿ ಸಮುದಾಯದ ಕೆಲವರು ವಿರೋಧಿಸಿದ್ದರು. ಸೂಚನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿದಾಗ, ಭದ್ರತಾ ಪಡೆಗಳು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ಉಂಟಾಯಿತ್ತು.
.ಉತ್ತರ ಪ್ರದೇಶ: ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಪತ್ರಕರ್ತನ ಹತ್ಯೆ.ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯ ಧ್ವಂಸ: ಮೋದಿ ವಿರುದ್ಧ ಅಶ್ಲೀಲ ಬರಹ.
ಪ್ರತಿಭಟನೆಯಲ್ಲಿ ಭಾಗಿಯಾದವರು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿ, ಇಂಫಾಲ್ನಿಂದ ಸೇನಾಪತಿ ಜಿಲ್ಲೆಗೆ ತೆರಳುತ್ತಿದ್ದ ಸರ್ಕಾರಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ತಡೆಯಲು ಯತ್ನಿಸಿದಾಗ ಪರಿಸ್ಥಿತಿ ಇನ್ನಷ್ಟು ವಿಷಮಗೊಂಡಿತು. ಪ್ರತಿಭಟನಕಾರರು ಇಂಫಾಲ್–ದಿಮಪುರ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದರು. ಸರ್ಕಾರಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟುಮಾಡಲು ಟೈರ್ಗಳಿಗೆ ಬೆಂಕಿ ಹಚ್ಚಿದ್ದರು.
.ಕೋಲ್ಕತ್ತ ವೈದ್ಯೆ ಅತ್ಯಾಚಾರ, ಕೊಲೆ |ನ್ಯಾಯಕ್ಕಾಗಿ ಮೋದಿ ಭೇಟಿಗೆ ಮೃತಳ ತಾಯಿ ಮನವಿ.ನೈರುತ್ಯ ಕೊಲಂಬಿಯಾದಲ್ಲಿ ಅಪಹರಿಸಲ್ಪಟ್ಟಿದ್ದ 29 ಅಧಿಕಾರಿಗಳ ಬಿಡುಗಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.