ಇಂಫಾಲ: ಮಣಿಪುರದ ಚುರಾಚಾಂದ್ಪುರ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿ ಸೋಮವಾರ ಗುಂಡಿನ ದಾಳಿ ನಡೆಸಿದ್ದು, 60 ವರ್ಷದ ಮಹಿಳೆ ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯು ಚುರಾಚಾಂದ್ಪುರದಿಂದ ಏಳು ಕಿಲೋ ಮೀಟರ್ ದೂರದಲ್ಲಿರುವ ಮೋಂಗ್ಜಂಗ್ ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ 2ಕ್ಕೆ ನಡೆದಿದೆ. ಈ ಸಂದರ್ಭದಲ್ಲಿ ಮೃತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

‘ದಾಳಿ ನಡೆಸಿದ ವ್ಯಕ್ತಿಯು ಅತ್ಯಂತ ಸಮೀಪದಿಂದ ಗುಂಡು ಹಾರಿಸಿ ಇವರನ್ನು ಕೊಂದಿದ್ದಾನೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳದಲ್ಲಿ 12 ಕಾಡತೂಸುಗಳು ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯ ಹೋಣೆಯನ್ನು ಯಾವುದೇ ಸಂಘಟನೆ ಈವರೆಗೂ ಹೊತ್ತುಕೊಂಡಿಲ್ಲ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಹಾಗೂ ಹೆಚ್ಚುವರಿ ಭದ್ರತಾ ಪಡೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಎಂದು ವರದಿಯಾಗಿದೆ.

2023ರ ಮೇ ತಿಂಗಳಿನಿಂದ ಆರಂಭವಾದ ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 260ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈಗಲೂ ರಾಜ್ಯದಲ್ಲಿ ಆಗಾಗ್ಗ ಹಿಂಸಾಚಾರಗಳು ನಡೆಯುತ್ತಿರುವುದು ವರದಿಯಾಗುತ್ತಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.