ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ ಹಿಂಸಾಚಾರ: ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ನೋಟಿಸ್‌

Published 11 ಮಾರ್ಚ್ 2024, 15:57 IST
Last Updated 11 ಮಾರ್ಚ್ 2024, 15:57 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರ ಪ್ರಕರಣಗಳ ತನಿಖೆಯ ಪ್ರಗತಿ ಕುರಿತಂತೆ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಣಿಪುರ ಸರ್ಕಾರ, ಸಿಬಿಐ ಮತ್ತು ಎನ್‌ಐಎಗೆ ನಿರ್ದೇಶಿಸಿದೆ.

ತನಿಖೆಯ ಹಂತ, ಪ್ರಕರಣಗಳನ್ನು ಕುರಿತು ಸಲ್ಲಿಸಲಾಗಿರುವ ಆರೋಪಪಟ್ಟಿ, ವಿಚಾರಣೆ ಅಸ್ಸಾಂನಲ್ಲಿ ಆರಂಭ ಆಗಿದೆಯೇ ಅಥವಾ ಮಣಿಪುರದಲ್ಲಿಯೇ ನಡೆಯಲಿದೆಯೇ ಎಂಬ ಕುರಿತಂತೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ.

ಕಳೆದ ಎರಡು ತಿಂಗಳಲ್ಲಿ ಜಿಲ್ಲಾಧಿಕಾರಿ ನಿವಾಸದ ಮೇಲಿನ ದಾಳಿ ಸೇರಿದಂತೆ ಹಲವು ಹಿಂಸಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿತಿ ರಕ್ಷಣೆ ಕುರಿತಂತೆ ನಿರ್ದೇಶನವನ್ನು ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿತು.

ನಾಗರಿಕ ಸಮಾಜದ ಸಂಘಟನೆಗಳಿಗೆ ಈ ಬಗ್ಗೆ ನಿರ್ದೇಶನ ನೀಡಲಾಗದು. ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗಾಗಿಯೇ ರಾಜ್ಯ ಸರ್ಕಾರವಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿತು. 

ಹಿಂಸಾಚಾರ ಕುರಿತು ನ್ಯಾಯಮೂರ್ತಿ ಗೀತಾ ಮಿತ್ತಲ್‌ ಸಮಿತಿಯ ಇತ್ತೀಚಿನ ವರದಿಯ ಸೂಚನೆಗಳನ್ನು ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರಿಗೆ ಸಲಹೆ ಮಾಡಿತು.

ಕೆಲವು ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ಆದೇಶ ನೀಡಲು ಸುಪ್ರೀಂ ಕೋರ್ಟ್, ನ್ಯಾಯಮೂರ್ತಿ ಮಿತ್ತಲ್‌ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT