ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಹಿಂಸಾಚಾರ: ತನಿಖೆ ಮೇಲ್ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚನೆ

Published 7 ಆಗಸ್ಟ್ 2023, 12:59 IST
Last Updated 7 ಆಗಸ್ಟ್ 2023, 12:59 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣ ಸಂಬಂಧ ತನಿಖೆಯ ಮೇಲ್ವಿಚಾರಣೆ ನಡೆಸಲು ಹಾಗೂ ಪರಿಹಾರಗಳನ್ನು ಸೂಚಿಸಲು ಮೂವರು ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯೊಂದನ್ನು ಸುಪ್ರೀಂ ಕೋರ್ಟ್ ಸೋಮವಾರ ರಚಿಸಿದೆ.

ಮಣಿಪುರದಲ್ಲಿ ನಡೆದ ಹಿಂಸಾಚಾರ ಘಟನೆಗಳ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಮಣಿಪುರ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸುತ್ತಿರುವ ತನಿಖೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ಎಲ್ಲಾ ಮಹಿಳಾ ನ್ಯಾಯಾಂಗ ಸಮಿತಿಯನ್ನು ರಚಿಸಿದೆ.

ಸಮಿತಿಯಲ್ಲಿ ಮಾಜಿ ನ್ಯಾಯಮೂರ್ತಿಗಳಾದ ಶಾಲಿನಿ ಜೋಶಿ ಮತ್ತು ಆಶಾ ಮೆನನ್ ಕೂಡ ಇರಲಿದ್ದಾರೆ.

ಈ ಸಮಿತಿಯು ಸಿಬಿಐ ಹಾಗೂ ಪೊಲೀಸರು ನಡೆಯುತ್ತಿರುವ ತನಿಖೆಗಳನ್ನು ಪರಿಶೀಲಿಸುವ ಮತ್ತು ಪರಿಹಾರ ಕ್ರಮಗಳು ಹಾಗೂ ಪುನರ್ವಸತಿ ಕಲ್ಪಸುವ ಕೆಲಸ ಮಾಡಲಿದೆ ಎಂದು ಕೋರ್ಟ್ ತಿಳಿಸಿದೆ.

ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯನ್ನು ಕಾನೂನಿನ ನಂಬಿಕೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ ನ್ಯಾಯಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT