ಬಿಷ್ಣುಪುರದ ಕಣಿವೆ ಜಿಲ್ಲೆಯ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮೈತೆಯಿ ರೈತನೊಬ್ಬ ಗುಂಡೇಟಿನಿಂದ ಗಾಯಗೊಂಡ ನಂತರ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಪಡೆಗಳ ಮೇಲೆ ಅಪರಿಚಿತ ಶಸ್ತ್ರಸಜ್ಜಿತ ಗುಂಪು ಗುಂಡಿನ ದಾಳಿ ನಡೆಸಿತ್ತು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಮಹಿಳೆಗೆ ಗುಂಡು ತಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.