ಇಂಫಾಲ್: ಮಣಿಪುರದ ಇಂಫಾಲ್ ಕಣಿವೆಯ 5 ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಜಪ್ತಿ ಮಾಡಿವೆ.

ಖಚಿತ ಮಾಹಿತಿ ಮೇರೆಗೆ ಮೈತೇಯಿ ಪ್ರಾಬಲ್ಯದ ಕಣಿವೆ ಜಿಲ್ಲೆಗಳಾದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಮಣಿಪುರ ಪೊಲೀಸ್, ಸಿಆರ್ಪಿಎಫ್, ಬಿಎಸ್ಎಫ್, ಸೇನೆ ಮತ್ತು ಅಸ್ಸಾಂ ರೈಫಲ್ಸ್ನ ಜಂಟಿ ತಂಡಗಳು ನಡೆಸಿದ ಕಾರ್ಯಾಚರಣೆಯ ವೇಳೆ ಮೂರು ಎಕೆ–47, ಒಂದು ಎಂ16 ರೈಫಲ್, ಐದು ಐಎನ್ಎಸ್ಎಎಸ್ ರೈಫಲ್, ಒಂದು ಐಎನ್ಎಸ್ಎಎಸ್ ಎಲ್ಎಂಜಿ, ನಾಲ್ಕು ಎಸ್ಎಲ್ಆರ್, 20 ಪಿಸ್ತೂಲ್, ನಾಲ್ಕು ಕಾರ್ಬೈನ್, ಏಳು 303 ರೈಫಲ್ ಮತ್ತು ಎಂಟು ಇತರ ರೈಫಲ್ಗಳು ಸೇರಿದಂತೆ ಒಟ್ಟು 90 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

21 ಗ್ರೆನೇಡ್, ಆರು ಐಇಡಿ, 21 ಮ್ಯಾಗಜೀನ್ ಮತ್ತು 24 ವೈರ್ಲೆಸ್ ಹ್ಯಾಂಡ್ಸೆಟ್ ಸೇರಿದಂತೆ ಒಟ್ಟು 728 ಮದ್ದುಗುಂಡುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ಜಪ್ತಿ ಮಾಡಲಾಗಿದೆ ಎಂದೂ ಅವರು ಹೇಳಿದ್ದಾರೆ.

ಮಣಿಪುರದಲ್ಲಿ 2023ರ ಮೇ 3ರಂದು ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದ ವೇಳೆ 6,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು. ಸದ್ಯ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರೂ ಇನ್ನಷ್ಟು ಶಸ್ತ್ರಾಸ್ತ್ರಗಳು ನಾಪತ್ತೆಯಾಗಿರುವುದು ಕಳವಳವನ್ನುಂಟು ಮಾಡಿದೆ.

ಸಂಘರ್ಷ ಪೀಡಿತ ಮಣಿಪುರದಲ್ಲಿ ಫೆಬ್ರುವರಿಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಭದ್ರತಾ ಪಡೆಗಳು ಪ್ರಯತ್ನಿಸುತ್ತಿವೆ. ರಾಜ್ಯದ ವಿವಿದೆಢೆ ಕಾರ್ಯಾಚರಣೆಗಳನ್ನು ನಡೆಸುವ ಮೂಲಕ ಈವರೆಗೆ 3,000ಕ್ಕೂ ಹೆಚ್ಚು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಮಣಿಪುರ: INSAS, SLR ರೈಫಲ್ ಸೇರಿ 328 ಅತ್ಯಾಧುನಿಕ ಶಸ್ತ್ರಾಸ್ತ್ರ ವಶಕ್ಕೆ.ಮಣಿಪುರ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ಜಪ್ತಿ.ಮಣಿಪುರ: ಕಾಂಗ್ಪೋಕ್ಪಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ.ಮಣಿಪುರ: ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.