ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ಬಳಿಕ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಇಂದು ಬೆಳಿಗ್ಗೆ ವಿಚಾರಣೆಗೆ ಒಳಪಡಿಸಿದ್ದರು. ಸತತ ಎಂಟು ಗಂಟೆಗಳ ವಿಚಾರಣೆ ಬಳಿಕ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಮನೀಶ್ ಸಿಸೋಡಿಯಾ ಅವರು ಅಬಕಾರಿ ಇಲಾಖೆಯ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್ 17ರಂದು ವಿಚಾರಣೆ ನಡೆಸಲಾಗಿತ್ತು. ಅಷ್ಟೇ ಅಲ್ಲ ಅವರ ಮನೆ ಮತ್ತು ಬ್ಯಾಂಕ್ ಲಾಕರ್ಗಳನ್ನೂ ಶೋಧಿಸಲಾಗಿತ್ತು.

ಸಿಬಿಐ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನ ಖಂಡಿಸಿ ದೇಶದಾದ್ಯಂತ ಸಿಬಿಐ ಕಚೇರಿಗಳ ಎದುರು ನಾಳೆ (ಸೋಮವಾರ) ಬೃಹತ್ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಕ್ಷ (ಎಎಪಿ) ನಿರ್ಧಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇವನ್ನೂ ಓದಿ...

* ಸಿಬಿಐ ಕಚೇರಿ ಬಳಿ ಪ್ರತಿಭಟನೆ: ಎಎಪಿ ಸಂಸದ ಸಂಜಯ್ ಸಿಂಗ್, ಅನೇಕರು ಪೊಲೀಸ್ ವಶಕ್ಕೆ

* ಜೈಲಿಗೆ ಹಾಕಿದರೂ ’ಡೋಂಟ್ ಕೇರ್’: ಸಿಸೋಡಿಯಾ

* ಅಬಕಾರಿ ಹಗರಣ: ಸಿಸೋಡಿಯಾ ಬಂಧನ ಸಾಧ್ಯತೆ; ಕೇಜ್ರಿವಾಲ್ ಟ್ವೀಟ್ನಲ್ಲಿ ಏನಿದೆ?

* ರಾಜಕೀಯ ಗೂಢಚರ್ಯೆ: ಸಿಸೋಡಿಯಾ ವಿಚಾರಣೆ- ಸಿಬಿಐಗೆ ಕೇಂದ್ರ ಸಮ್ಮತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.