ನವದೆಹಲಿ: ಇಂದು ಮಾಜಿ ಪ್ರಧಾನಿ, ದಿವಂಗತ ಮನಮೋಹನ್ ಸಿಂಗ್ ಅವರ 93ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

‘ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ದೀರ್ಘ ಅವಧಿಯ ಸಾರ್ವಜನಿಕ ಜೀವನದಲ್ಲಿ ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ನಾವು ಸ್ಮರಿಸುತ್ತೇವೆ’ ಎಂದು ನರೇಂದ್ರ ಮೋದಿ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ಅತ್ಯಂತ ನಮ್ರತೆ ಮತ್ತು ಬುದ್ಧಿವಂತಿಕೆಯ ವ್ಯಕ್ತಿಯಾಗಿ ಹಾಗೂ ಬಲವಾದ ಆರ್ಥಿಕತೆಯನ್ನು ನಿರ್ಮಿಸಲು ಅವರು ನೀಡಿದ ಐತಿಹಾಸಿಕ ಕೊಡುಗೆಗಾಗಿ ಮನಮೋಹನ್ ಸಿಂಗ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಮರಿಸಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಸಿಂಗ್ ಅವರ ಕೊಡುಗೆಯನ್ನು ನೆನಪಿಸಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರು ಭಾರತದ ಆರ್ಥಿಕ ಪರಿವರ್ತನೆಯ ಸೌಮ್ಯ ಶಿಲ್ಪಿಯಾಗಿದ್ದರು ಎಂದು ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.

‘ನಮ್ರತೆ ಮತ್ತು ಬುದ್ಧಿವಂತಿಕೆಯ ವ್ಯಕ್ತಿಯಾಗಿದ್ದ ಅವರು ಘನತೆಯಿಂದ ನಡೆದುಕೊಂಡಿದ್ದರು. ತಮ್ಮ ಮಾತುಗಳಿಗಿಂತ ಜೋರಾಗಿ ತಮ್ಮ ಕಾರ್ಯಗಳೇ ಮಾತನಾಡುವಂತೆ ಮಾಡಿದ್ದರು. ಆರ್ಥಿಕ ಸುಧಾರಣೆಗಳ ಬಗ್ಗೆ ಅವರ ದೃಷ್ಟಿಕೋನವು ಅವಕಾಶದ ಹೊಸ ಬಾಗಿಲುಗಳನ್ನು ತೆರೆಯಿತು. ಮಧ್ಯಮ ವರ್ಗದ ಅಭಿವೃದ್ಧಿಗೆ ನೆರವಾಯಿತು. ಅಸಂಖ್ಯಾತ ಕುಟುಂಬಗಳನ್ನು ಬಡತನದಿಂದ ಹೊರತಂದಿತು’ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

ಸಿಂಗ್ ನ್ಯಾಯಸಮ್ಮತ ಮತ್ತು ಎಲ್ಲರನ್ನೂ ಒಳಗೊಳ್ಳುವಲ್ಲಿ ಆಳವಾಗಿ ನಂಬಿಕೆ ಇಟ್ಟಿದ್ದರು. ಲಕ್ಷಾಂತರ ಜನರ ಜೀವನವನ್ನು ಮುಟ್ಟಿದ ಕಲ್ಯಾಣ ಕ್ರಮಗಳ ಮೂಲಕ ಬೆಳವಣಿಗೆಗೆ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.

'ಭಾರತೀಯರ ಪಾಲಿಗೆ ಹಲವು ಪೀಳಿಗೆವರೆಗೂ, ಅವರು ಪ್ರಾಮಾಣಿಕತೆ, ಬುದ್ಧಿಶಕ್ತಿ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಶಾಶ್ವತ ಸಂಕೇತವಾಗಿ ಉಳಿದಿದ್ದಾರೆ ಎಂದಿದ್ದಾರೆ.

ರಾಷ್ಟ್ರ ನಿರ್ಮಾಣಕ್ಕೆ ಅವರ ಅಚಲ ಬದ್ಧತೆ, ಬಡವರು ಮತ್ತು ತುಳಿತಕ್ಕೊಳಗಾದವರ ಪರವಾಗಿ ಅವರ ದಿಟ್ಟ ನಿರ್ಧಾರಗಳು, ಬಲವಾದ ಆರ್ಥಿಕತೆಯನ್ನು ನಿರ್ಮಿಸಲು ಅವರ ಐತಿಹಾಸಿಕ ಕೊಡುಗೆ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತದೆ ಎಂದು ರಾಹುಲ್ ಗಾಂಧಿ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.

‘ಅವರ ಸರಳತೆ, ನಮ್ರತೆ ಮತ್ತು ಪ್ರಾಮಾಣಿಕತೆ ನಮ್ಮೆಲ್ಲರಿಗೂ ಸ್ಫೂರ್ತಿಯ ಮೂಲವಾಗಿದೆ’ಎಂದಿದ್ದಾರೆ.

2004ರಿಂದ 2014ರವರೆಗೆ ಸಿಂಗ್ ದೇಶದ ಪ್ರಧಾನಿಯಾಗಿದ್ದರು. ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ನೇತೃತ್ವ ವಹಿಸಿದ್ದರು. ದೇಶದಲ್ಲಿ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದು ಪರಿಗಣಿಸಲ್ಪಟ್ಟಿದ್ದರು.

ಸಿಂಗ್ 2004 ಮತ್ತು 2014ರ ನಡುವೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಪ್ರಧಾನಿಯಾಗಿದ್ದರು. 1991 ಮತ್ತು 1996ರ ನಡುವೆ ಪಿ.ವಿ. ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಸಿಂಗ್ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಭಾರತವು ಆರ್ಥಿಕ ಸುಧಾರಣೆಗಳಿಗೆ ಸಾಕ್ಷಿಯಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.