ನವದೆಹಲಿ/ಹೈದರಾಬಾದ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೋವಿಡ್ ದೃಢಪಟ್ಟಿದೆ. 88 ವರ್ಷದ ಸಿಂಗ್ ಅವರನ್ನು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್) ಸೋಮವಾರ ದಾಖಲಿಸಲಾಗಿದೆ.

ಸಿಂಗ್ ಅವರಿಗೆ ಸ್ವಲ್ಪ ಜ್ವರ ಇತ್ತು. ಹಾಗಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್)ಅವರಿಗೂ ಕೋವಿಡ್ ದೃಢಪಟ್ಟಿದೆ. ಅವರಿಗೆ ಸೌಮ್ಯ ಸ್ವರೂಪದ ಲಕ್ಷಣಗಳು ಮಾತ್ರ ಇವೆ. ಹಾಗಾಗಿ, ಅವರು ತಮ್ಮ ತೋಟದ ಮನೆಯಲ್ಲಿ ಪ್ರತ್ಯೇಕವಾಸದಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ. ತೆಲಂಗಾಣ ಮುಖ್ಯಕಾರ್ಯದರ್ಶಿ ಸೋಮೇಶ್ ಕುಮಾರ್ ಅವರಿಗೂ ಕೆಲ ದಿನಗಳ ಹಿಂದೆ ಕೋವಿಡ್ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.