ನವದೆಹಲಿ:ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರುಮಾಜಿ ಪ್ರಧಾನಿ ಮನಮೋಹನ್ಸಿಂಗ್ ಅವರನ್ನು ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ಸ್ಥಾನಕ್ಕೆ ಮನಮೋಹನ್ಸಿಂಗ್ ಅವರ ಹೆಸರನ್ನು ಸೂಚಿಸಿದ್ದಾರೆ. ದಿಗ್ವಿಜಯ ಸಿಂಗ್ ಅವರನ್ನು ಸಂಸದೀಯ ಸ್ಥಾಯಿ ಸಮಿತಿಯ ನಗರಾಭಿವೃದ್ಧಿ ಉಪಸಮಿತಿಗೆ ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ ಎಂದು ರಾಜ್ಯಸಭಾ ಪ್ರಕಟಣೆ ತಿಳಿಸಿದೆ.

ಆಗಸ್ಟ್ನಲ್ಲಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾದಮನಮೋಹನ್ಸಿಂಗ್ ಅವರಿಗೆಹಣಕಾಸು ಸ್ಥಾಯಿ ಸದಸ್ಯ ಸ್ಥಾನ ಸಿಗುವಂತೆ ಮಾಡಲು ದಿಗ್ವಿಜಯ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಕಳೆದ ರಾಜ್ಯಸಭಾ ಸದಸ್ಯತ್ವದ ಅವಧಿಯಲ್ಲಿ ಸರ್ಕಾರ ಜಾರಿಗೊಳಿಸಿದ್ದ ನೋಟು ರದ್ದತಿ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿರುದ್ಧ ಮನಮೋಹನ್ ಸಿಂಗ್ ಧ್ವನಿ ಎತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.