ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೋಹರ್ ಪರ್‍ರೀಕರ್ ಬದುಕಿನ ಹಾದಿ...

Last Updated 17 ಮಾರ್ಚ್ 2019, 16:27 IST
ಅಕ್ಷರ ಗಾತ್ರ

ಪಣಜಿ: ಇಂದು ನಿಧನರಾಗಿರುವ ಮನೋಹರ ಪರೀಕರ್‌ ಅವರುಗೋವಾ ಮುಖ್ಯಮಂತ್ರಿ ಹಾಗೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದವರು. ಬಿಜೆಪಿ ಪಾಳೆಯದಲ್ಲಿ ಬುದ್ದಿವಂತ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ, ಅನಾರೋಗ್ಯದ ನಡುವೆಯೂ ಆಡಳಿತ ನೀಡಿದ ವ್ಯಕ್ತಿ.ಅವರ ಬದುಕಿನ ಹಾದಿಯ ಒಂದು ಕಿರು ನೋಟ ಇಲ್ಲಿದೆ.

* 1955ರ ಡಿಸೆಂಬರ್‌13ರಂದು ಉತ್ತರ ಗೋವಾದ ಮಾಪುಸಾದಲ್ಲಿ ಜನನ

* ಮಡ್‌ಗಾಂವ್‌ನ ಯೊಯೊಲಾ ಹೈಸ್ಕೂಲ್‌ನಲ್ಲಿ ಶಾಲಾ ಶಿಕ್ಷಣ

* 1978ರಲ್ಲಿ ಬಾಂಬೆ ಐಐಟಿಯಿಂದ ಮೆಟಾಲರ್ಜಿಕಲ್ ಎಂಜಿನಿಯರಿಂಗ್‌ ಪದವಿ

* ಶಾಲಾ ದಿನಗಳಲ್ಲೇ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯ

* 26ನೇ ವಯಸ್ಸಿನಲ್ಲೇ ಆರ್‌ಎಸ್‌ಎಸ್‌ನ ಸಂಘಚಾಲಕನಾಗಿ ಆಯ್ಕೆ

* ರಾಮಜನ್ಮಭೂಮಿ ಚಳವಳಿಯಲ್ಲಿ ಭಾಗಿ

* 1994ರಲ್ಲಿ ಬಿಜೆಪಿಯಿಂದ ಶಾಸಕನಾಗಿ ಆಯ್ಕೆ

* 1999ರ ನವೆಂಬರ್‌: ಗೋವಾ ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಆಯ್ಕೆ

* 2000ನೇ ಫೆಬ್ರುವರಿ 24: ಮೊದಲ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ

* 2002 ಜೂನ್ 5: ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿ

* 2007ರಲ್ಲಿ ಪರ್‍ರೀಕರ್ ನೇತೃತ್ವದ ಗೋವಾ ಬಿಜೆಪಿಗೆ ಸೋಲು

* 2012ರಲ್ಲಿ ಮತ್ತೆ ಗೋವಾ ಮುಖ್ಯಮಂತ್ರಿ

* 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು, ಕೇಂದ್ರ ರಾಜಕಾರಣಕ್ಕೆ ಪರ್‍ರೀಕರ್

* 2014 ನವೆಂಬರ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕಾರ

* ಅನಾರೋಗ್ಯದ ನಿಮಿತ್ತ ಕೇಂದ್ರ ಸಂಪುಟ ತೊರೆದಪರ್‍ರೀಕರ್

* 2017 ಮಾರ್ಚ್ 14: ಮತ್ತೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ

*2018ರ ಫೆ.14ರಂದು ಅನಾರೋಗ್ಯದಿಂದಾಗಿ ಜಿಎಂಸಿಎಚ್‌ಗೆ ದಾಖಲು

* ಮಾರ್ಚ್‌ 3ರಂದು ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಅವರು, ಜೂನ್‌ 14ರಂದು ವಾಪಸ್‌

* ಸೆಪ್ಟೆಂಬರ್‌ 15ರಂದು ದೆಹಲಿಯ ಏಮ್ಸ್‌ನಲ್ಲಿ ಸುಮಾರು 1 ತಿಂಗಳು ಚಿಕಿತ್ಸೆ

* ಅಕ್ಟೋಬರ್‌ 14ರಂದು ಗೋವಾಗೆ ಮರಳಿ ಖಾಸಗಿ ನಿವಾಸದಿಂದಲೇ ರಾಜ್ಯದ ಆಡಳಿತ ನಡೆಸಿದ್ದರು

* 2019ರ ಜನವರಿ 2ರಂದು ಮುಖ್ಯಮಂತ್ರಿ ಕಚೇರಿಗೆ ಹಾಜರಾಗುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದರು.

* ಜ. 29ರಂದು ಬಜೆಟ್‌ ಅಧಿವೇಶದಲ್ಲಿ ಭಾಗಿಯಾಗಿ, ಜ.30ರಂದು ರಾಜ್ಯ ಬಜೆಟ್‌ ಮಂಡಿಸಿದ್ದರು.

* ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು.

* ಮಾರ್ಚ್‌ 17ರಂದು ರಾತ್ರಿ ನಿಧನರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT