ನವದೆಹಲಿ: ಪತಿಯ ಗೆಳತಿ ಆಗಿದ್ದಿದ್ದಕ್ಕೆ ಅಥವಾ ಆತನ ಜೊತೆ ಪ್ರಣಯ ಸಂಬಂಧ ಹೊಂದಿದ್ದುದಕ್ಕೆ ಆಕೆಯ ವಿರುದ್ಧ ಆತನ ಪತ್ನಿಯು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 498(ಎ) ಅಡಿಯಲ್ಲಿ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮುಂದಾಗಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ವರದಕ್ಷಿಣೆ ಕಿರುಕುಳದ ಆರೋಪದ ಅಡಿಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದಾದರೆ ಪತಿಯ ಜೊತೆ ಆ ವ್ಯಕ್ತಿಯು ರಕ್ತಸಂಬಂಧ, ವೈವಾಹಿಕ ಸಂಬಂಧ ಅಥವಾ ದತ್ತು ಮೂಲಕ ಬರುವ ಸಂಬಂಧ ಹೊಂದಿರಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠವು ಹೇಳಿದೆ.

2021ರ ಏಪ್ರಿಲ್ 12ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವೊಂದನ್ನು ವಿಭಾಗೀಯ ಪೀಠವು ರದ್ದುಪಡಿಸಿದೆ. ಐಪಿಸಿಯ ಸೆಕ್ಷನ್ 498(ಎ), 504 ಮತ್ತು 109 ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಹಾಗೂ ನಂತರದ ದೋಷಾರೋಪ ಪಟ್ಟಿಯನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.