ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ಬಸ್‌ಗೆ ವ್ಯಾನ್ ಡಿಕ್ಕಿ: 10 ಮಂದಿ ಸಾವು, 27 ಜನರಿಗೆ ಗಾಯ

Published 18 ಆಗಸ್ಟ್ 2024, 8:47 IST
Last Updated 18 ಆಗಸ್ಟ್ 2024, 8:47 IST
ಅಕ್ಷರ ಗಾತ್ರ

ಬುಲಂದ್‌ಶಹರ್‌: ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸೇಲಂಪುರದಲ್ಲಿ ವ್ಯಾನ್‌ ಮತ್ತು ಬಸ್‌ ಢಿಕ್ಕಿಯಿಂದಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ. 

ಬದೌನ್‌– ಮೀರತ್‌ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ‘ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಜಿಲ್ಲಾಧಿಕಾರಿ ಚಂದ್ರ ಪ್ರಕಾಶ್‌ ಸಿಂಗ್‌ ಅವರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT