ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರದ ಬಾಬಾ ಸಿದ್ಧಾಂತ ದೇವಾಲಯದಲ್ಲಿ ಕಾಲ್ತುಳಿತ; 7 ಮಂದಿ ಸಾವು: ಹಲವರಿಗೆ ಗಾಯ

Published : 12 ಆಗಸ್ಟ್ 2024, 2:53 IST
Last Updated : 12 ಆಗಸ್ಟ್ 2024, 2:53 IST
ಫಾಲೋ ಮಾಡಿ
Comments

ಜಹಾನಾಬಾದ್‌: ಇಲ್ಲಿಯ ಬಾಬಾ ಸಿದ್ದೇಶ್ವರನಾಥ ದೇವಾಲಯದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಮಹಿಳೆಯರು ಸೇರಿ ಏಳು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ. 

ಮೃತರನ್ನು ಪ್ಯಾರೆ ಪಾಸ್ವಾನ್‌ (30), ನಿಶಾ ದೇವಿ (30), ಪೂನಂ ದೇವಿ (30), ನಿಶಾ ಕುಮಾರಿ (21) ಮತ್ತು ಸುಶೀಲಾ ದೇವಿ (64) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಮೃತರಲ್ಲಿ ಬಹುತೇಕರು ಕಾವಡ್‌ ಯಾತ್ರಿಕರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮುಕುಂದಪುರ ಮತ್ತಿತರ ಹತ್ತಿರದ ಸ್ಥಳಗಳಲ್ಲಿಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಅವರಲ್ಲಿ 10 ಮಂದಿಗೆ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಾವಡ್‌ ಯಾತ್ರಿಕರು ಮತ್ತು ಹೂವು ಮಾರಾಟಗಾರರ ನಡುವೆ ನಡೆದ ಘರ್ಷಣೆಯಿಂದಾಗಿ ಈ ಘಟನೆ ಸಂಭವಿಸಿದೆ.

’ದುರ್ಘಟನೆಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾವಡ್‌ ಯಾತ್ರಿಕರ ನಡುವಣ ಜಗಳದಿಂದ ಕಾಲ್ತುಳಿತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅವರ ನಡುವೆ ವಾಗ್ವಾದವೂ ನಡೆದಿತ್ತು. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ‘ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಲಂಕೃತಾ ಪಾಂಡೆ ತಿಳಿಸಿದ್ದಾರೆ. 

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು, ಮೃತರ ಕುಟುಂಬಗಳಿಗೆ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಇದಲ್ಲದೇ ಜಿಲ್ಲಾಡಳಿತವು ಮೃತರ ಅಂತಿಮ ಸಂಸ್ಕಾರಕ್ಕೆ ₹20 ಸಾವಿರ ಮತ್ತು ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡಲಿದೆ. , ಬಿಹಾರ : ಇಲ್ಲಿಯ ಬಾಬಾ ಸಿದ್ದೇಶ್ವರನಾಥ ದೇವಾಲಯದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಮಹಿಳೆಯರು ಸೇರಿ ಏಳು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ. 

ಮೃತರನ್ನು ಪ್ಯಾರೆ ಪಾಸ್ವಾನ್‌ (30), ನಿಶಾ ದೇವಿ (30), ಪೂನಂ ದೇವಿ (30), ನಿಶಾ ಕುಮಾರಿ (21) ಮತ್ತು ಸುಶೀಲಾ ದೇವಿ (64) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಮೃತರಲ್ಲಿ ಬಹುತೇಕರು ಕಾವಡ್‌ ಯಾತ್ರಿಕರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮುಕುಂದಪುರ ಮತ್ತಿತರ ಹತ್ತಿರದ ಸ್ಥಳಗಳಲ್ಲಿಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಅವರಲ್ಲಿ 10 ಮಂದಿಗೆ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಾವಡ್‌ ಯಾತ್ರಿಕರು ಮತ್ತು ಹೂವು ಮಾರಾಟಗಾರರ ನಡುವೆ ನಡೆದ ಘರ್ಷಣೆಯಿಂದಾಗಿ ಈ ಘಟನೆ ಸಂಭವಿಸಿದೆ.

’ದುರ್ಘಟನೆಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾವಡ್‌ ಯಾತ್ರಿಕರ ನಡುವಣ ಜಗಳದಿಂದ ಕಾಲ್ತುಳಿತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅವರ ನಡುವೆ ವಾಗ್ವಾದವೂ ನಡೆದಿತ್ತು. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ‘ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಲಂಕೃತಾ ಪಾಂಡೆ ತಿಳಿಸಿದ್ದಾರೆ. 

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು, ಮೃತರ ಕುಟುಂಬಗಳಿಗೆ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಇದಲ್ಲದೇ ಜಿಲ್ಲಾಡಳಿತವು ಮೃತರ ಅಂತಿಮ ಸಂಸ್ಕಾರಕ್ಕೆ ₹20 ಸಾವಿರ ಮತ್ತು ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT