ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ | ಆಟೊ – ಲಾರಿ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಆರು ಮಂದಿ ಸಾವು

Published 6 ಜನವರಿ 2024, 4:31 IST
Last Updated 6 ಜನವರಿ 2024, 4:31 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು (ಶನಿವಾರ) ಬೆಳಿಗ್ಗೆ ವೇಗವಾಗಿ ಬಂದ ಲಾರಿಯೊಂದು ಆಟೊರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಲನಗರ ಚೌರಸ್ತಾದಲ್ಲಿ ಆರು ಮಂದಿ ಪ್ರಯಾಣಿಕರಿದ್ದ ಆಟೊರಿಕ್ಷಾಕ್ಕೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೊದಲ್ಲಿದ್ದವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಲಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT