ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದ ಮದುವೆ ಮನೆಯಲ್ಲಿ ದುರಂತ: ಬಾವಿಯಲ್ಲಿ ಮುಳುಗಿ 13 ಮಹಿಳೆಯರ ಸಾವು

Last Updated 17 ಫೆಬ್ರುವರಿ 2022, 8:41 IST
ಅಕ್ಷರ ಗಾತ್ರ

ಕುಶಿನಗರ: ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ತಡರಾತ್ರಿ ಮದುವೆ ಸಮಾರಂಭವೊಂದರಲ್ಲಿ ದುರ್ಘಟನೆ ಸಂಭವಿಸಿದೆ. 'ಹಲ್ದಿ' ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಬಾವಿಯ ಮೇಲಿನ ಕಬ್ಬಿಣದ ಹೊದಿಕೆಯ ಮೇಲೆ ಮಹಿಳೆಯರು ಕುಳಿತಿದ್ದರು. ಈ ವೇಳೆ ಅದು ಕುಸಿದಿದ್ದು ಮಹಿಳೆಯರು ಬಾವಿಗೆ ಬಿದ್ದಿದ್ದಾರೆ. ಕುಶಿನಗರದ ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ 8.30ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಬಾವಿಯಲ್ಲಿ ಬಿದ್ದವರನ್ನು ರಕ್ಷಿಸಲು ಮಧ್ಯರಾತ್ರಿಯ ವರೆಗೆ ಕಾರ್ಯಾಚರಣೆ ನಡೆಯಿತು. ಸ್ಥಳೀಯರು, ಪೊಲೀಸರು ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 15 ಮಹಿಳೆಯರನ್ನು ರಕ್ಷಿಸಲಾಯಿತಾದರೂ, 13 ಮಹಿಳೆಯರು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿಎಂ ಯೋಗಿ ಆದಿತ್ಯನಾಥ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT