ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಖಾಸಗಿ ಬಸ್ವೊಂದು ಎರಡು ಟ್ರಕ್ಗಳಿಗೆ ಡಿಕ್ಕಿಯಾಗಿ ಸುಮಾರು 45 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನ ಲಹ್ದಿ ಕಾ ಬಾಸ್ ಬಳಿ ದಟ್ಟ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ. ಪ್ರಯಾಣಿಕರು ಉಜ್ಜಯಿನಿಯಿಂದ ದೆಹಲಿಗೆ ತೆರಳುತ್ತಿದ್ದರು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಾರುಲ್ ಗುಪ್ತಾ ಹೇಳಿದ್ದಾರೆ.

ಅವಘಡದಲ್ಲಿ ಬಸ್ಸಿನಲ್ಲಿದ್ದ ಸುಮಾರು 45 ಪ್ರಯಾಣಿಕರು ಗಾಯಗೊಂಡಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ದೌಸಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರನ್ನು ಜೈಪುರ ಮತ್ತು ಕೆಲವರನ್ನು ಚಿಕಿತ್ಸೆಗಾಗಿ ನೋಯ್ಡಾ ಮತ್ತು ದೆಹಲಿಗೆ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.