ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮುವಿನಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಸೇತುವೆ ಕುಸಿತ: 40 ಮಂದಿಗೆ ಗಾಯ

Last Updated 14 ಏಪ್ರಿಲ್ 2023, 11:34 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಸೇತುವೆ ಕುಸಿದಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಮಕ್ಕಳು ಸೇರಿದಂತೆ ಮಹಿಳೆಯರು ಗಾಯಗೊಂಡಿದ್ದಾರೆ. ಸೇತುವೆ ಕುಸಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಸೇತುವೆ ಮೇಲೆ ಹೆಚ್ಚು ಜನ ನಿಂತುಕೊಂಡಿದ್ದರಿಂದ ಭಾರ ಹೆಚ್ಚಾಗಿ ಸೇತುವೆ ಕುಸಿದಿದೆ ಎಂದು ಜಮ್ಮುವಿನ ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಸೇರಿದಂತೆ ವಿಪತ್ತು ನಿರ್ವಹಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT