ಹಾಪುರ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಶನಿವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಒಂಬತ್ತು ಕಾರ್ಮಿಕರು ಮೃತಪಟ್ಟಿದ್ದು 19 ಮಂದಿ ಗಾಯಗೊಂಡಿದ್ದಾರೆ.

ಘಟನೆ ನಡೆದಾಗ ಧೋಲಾನಾದ ಯುಪಿಎಸ್ಐಡಿಸಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಸುಮಾರು 30 ಜನರಿದ್ದರು. ಸ್ಫೋಟದ ತೀವ್ರತೆಗೆ ಕೈಗಾರಿಕಾ ಪ್ರದೇಶದ ಹಲವು ಕಾರ್ಖಾನೆಗಳ ಛಾವಣಿಗಳು ಹಾನಿಗೊಂಡಿವೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ಮೂರು ತಾಸು ಬೇಕಾಯಿತು. ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಘಟನೆ ಕುರಿತು ತಜ್ಞರಿಂದ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೂಚಿಸಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತ ಹೃದಯ ವಿದ್ರಾವಕವಾಗಿದೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ನೀಡಲು ಸಿದ್ಧವಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.