ಖಾರ್ಗೋನ್: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಖಾಸಗಿ ಬಸ್ವೊಂದು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 42 ಕಿ.ಮೀ ದೂರದಲ್ಲಿರುವ ಸೆಗಾಂವ್ ಬಳಿ ಖಾರ್ಗೋನ್-ಅಲಿರಾಜ್ಪುರ ಮಾರ್ಗವಾಗಿ ಸಂಚರಿಸುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ‘ಪಿಟಿಐ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.