ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್ | ಸಬರ್‌ಕಾಂತದಲ್ಲಿ ಟ್ರಕ್‌ಗೆ ಕಾರು ಡಿಕ್ಕಿ; ಏಳು ಮಂದಿ ಸ್ಥಳದಲ್ಲೇ ಸಾವು

Published : 25 ಸೆಪ್ಟೆಂಬರ್ 2024, 3:13 IST
Last Updated : 25 ಸೆಪ್ಟೆಂಬರ್ 2024, 3:13 IST
ಫಾಲೋ ಮಾಡಿ
Comments

ಅಹಮದಾಬಾದ್‌: ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯ ಹಿಮತ್‌ನಗರ ಬಳಿ ಇಂದು ಬೆಳಿಗ್ಗೆ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.

ಶ್ಯಾಮಲಾಜಿಯಿಂದ ಅಹಮದಾಬಾದ್‌ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹಿಮತ್‌ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಪಟೇಲ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT