ಬೆಮೆತರಾ: ಛತ್ತೀಸಗಢದ ಬೆಮೆತರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 23 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಮೃತರು ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್(6) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ರಾಯಪುರಕ್ಕೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.