ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ | ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ; ಆರು ಮಂದಿ ಸಾವು

Published 24 ಮಾರ್ಚ್ 2024, 1:52 IST
Last Updated 24 ಮಾರ್ಚ್ 2024, 1:52 IST
ಅಕ್ಷರ ಗಾತ್ರ

ಜೈಪುರ (ರಾಜಸ್ಥಾನ): ಜಿಲ್ಲೆಯ ಬಸ್ಸಿ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಗಾಯಾಳುಗಳನ್ನು ಇಲ್ಲಿನ ಸವಾಯಿ ಮಾನ್‌ ಸಿಂಗ್‌ ಸರ್ಕಾರಿ (ಎಸ್‌ಎಂಎಸ್‌) ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದಾರೆ' ಎಂದು ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜ್‌ಪುರೋಹಿತ್‌ ಹೇಳಿದ್ದಾರೆ.

'ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಬೆಂಕಿ ನಂದಿಸಲಾಗಿದೆ' ಎಂದು ಜೈಪುರ ಪೊಲೀಸ್‌ ಆಯುಕ್ತ ಬಿಜು ಜಾರ್ಜ್‌ ಜೋಸೆಫ್‌ ಮಾಹಿತಿ ನೀಡಿದ್ದಾರೆ.

'ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಶೇ 95ರಷ್ಟು ಸುಟ್ಟಗಾಯಗಳಾಗಿದ್ದ ಒಬ್ಬರು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶೇ 65ರಷ್ಟು ಸುಟ್ಟಗಾಯವಾಗಿರುವ ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ' ಎಂದು ಎಸ್‌ಎಂಎಸ್‌ ಆಸ್ಪತ್ರೆಯ ವೈದ್ಯ ಡಾ. ಅಚಲ್‌ ಶರ್ಮಾ ತಿಳಿಸಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು, ಪ್ರಕರಣ ಸಂಬಂಧ ತನಿಖೆ ನಡೆಸಬೇಕು. ತಲೆಮರೆಸಿಕೊಂಡಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಭಜನ್‌ ಲಾಲ್ ಶರ್ಮಾ, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT