ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ: ಸಿಡಿಲು ಬಡಿದು 10 ಮಂದಿ ಸಾವು

Published 7 ಜುಲೈ 2024, 15:28 IST
Last Updated 7 ಜುಲೈ 2024, 15:28 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ 24 ಗಂಟೆಯಲ್ಲಿ 10 ಜನರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ನಳಂದ ಜಿಲ್ಲೆಯಲ್ಲಿ ಇಬ್ಬರು, ವೈಶಾಲಿ, ಭಾಗಲ್ಪುರ, ಸಹರ್ಶ, ರೋಹತಾ‌ಸ್‌, ಸರಣ್‌, ಜಮುಯಿ, ಭೋಜ್‌ಪುರ ಮತ್ತು ಗೋಪಾಲ್‌ಗಂಜ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಬಿರುಗಾಳಿ ಸಹಿತ ಮಳೆಗೆ ಬಿಹಾರ ತತ್ತರಿಸಿದ್ದು, ಕಳೆದ ಕೆಲವಾರಗಳಲ್ಲಿ ಸಿಡಿಲು ಬಡಿದು 40 ಮಂದಿ ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್‌, ಜನರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT